ನಗರದಲ್ಲಿ ಇಂದು ಮಕ್ಕಳ ಹಕ್ಕುಗಳ ಕಾರ್ಯಾಗಾರ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಅಸ್ಪೈರ್ ಇಂಟರ್ ನ್ಯಾಷನಲ್ ಶಾಲೆಯ ಸಹಯೋಗದಲ್ಲಿ ಇಂದು ಬೆಳಿಗ್ಗೆ 10 ಕ್ಕೆ ಅಸ್ಪೈರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಪೋಕ್ಸೋ ಕಾನೂನಿನ ಅರಿವು ಹಾಗೂ ಮಕ್ಕಳ ಹಕ್ಕುಗಳ ಕಾರ್ಯಾಗಾರ ನಡೆಯಲಿದೆ. ಜಿಲ್ಲಾ ನ್ಯಾಯಾಧೀಶರಾದ ಶ್ರೀಪಾದ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ ಕರೆಣ್ಣವರ ಅಧ್ಯಕ್ಷತೆ ವಹಿಸುವರು.

error: Content is protected !!