ಹೊನ್ನಾಳಿ, ಆ.10- ತಾಲ್ಲೂಕಿನ ಹೊಸಹಳ್ಳಿ ಗ್ರಾ.ಪಂ.ಗೆ 2ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ `ಅ’ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ (ಮಹಿಳೆ)ಗೆ ಮೀಸಲಾತಿ ಇದ್ದು, ಅಧ್ಯಕ್ಷ ಸ್ಥಾನಕ್ಕೆ ಅಪ್ಪಲರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗೌರಮ್ಮ ತಿಪ್ಪೇಶಪ್ಪ ಇವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಯು.ಟಿ.ಪಿ. ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್ ಅವರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಆಯ್ಕೆಯನ್ನು ಅವಿರೋಧ ಎಂದು ಘೋಷಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರುಗಳು, ಪಿಡಿಓ ಶಿವಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು. ಚುನಾವಣೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಡಿ.ಸಿ.ಸಿ. ಬ್ಯಾಂಕ್ ಮಾಜಿ ನಿರ್ದೇಶಕ ಡಿ.ಎಸ್.ಸುರೇಂದ್ರಗೌಡ ಹಾಗೂ ಸಾಸ್ವೆಹಳ್ಳಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಚ್.ಎ. ಗದ್ದಿಗೇಶ್ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.