ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಉಪಾಧೀಕ್ಷಕರ ಕಚೇರಿ ಆವರಣದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಧ್ವಜ ವಂದನಾ ಕಾರ್ಯಗಾರ ಏರ್ಪಡಿಸಲಾಗಿದೆ. ರಾಷ್ಟ್ರೀಯ ಹಬ್ಬಗಳಲ್ಲಿ ವಿವಿಧ ಕಚೇರಿಗಳಲ್ಲಿ ರಾಷ್ಟ್ರಧ್ವಜ ಕಟ್ಟುವ, ಇಳಿಸುವ ಕಾರ್ಯ ನಿರ್ವಹಿಸುವ ಗ್ರೂಪ್ ಡಿ ಹಾಗೂ ಮೇಲ್ವಿಚಾರಣೆ ನಡೆಸುವ ಸಿಬ್ಬಂದಿಗಳಿಗೆ ಜಿಲ್ಲಾ ಸಂಘಟಕರು, ಭಾರತ ಸೇವಾದಳ ಹಾಗೂ ಪೊಲೀಸ್ ಉಪಾಧೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ದಾವಣಗೆರೆ ಇವರ ಮುಖಾಂತರ ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
January 11, 2025