ಮಲೇಬೆನ್ನೂರು, ಆ. 11 – ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಗುರುವಾರ ತಡರಾತ್ರಿಯಿಂದ ಎಡದಂಡೆ ಮತ್ತು ಬಲದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೇಬೆನ್ನೂರು ಶಾಖಾ ನಾಲೆ, ಹರಿಹರ ಶಾಖಾ ನಾಲೆ ನಾಲೆಗಳಿಗೆ ನೀರು ಹರಿಸಲಾಗುತ್ತದೆ.ಆದ್ದರಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಬಿ.ಆರ್, ಪ್ರಾಜೆಕ್ಟ್ ನ ಕ.ನೀ.ನಿ.ನಿ, ಭದ್ರಾ ಯೋಜನಾ ವೃತ್ತ, ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
January 10, 2025