ರಾಣೇಬೆನ್ನೂರಿನಲ್ಲಿ ವಿದ್ಯಾರ್ಥಿಗಳಿಗೆ ನಿವೃತ್ತ ಪ್ರಾಧ್ಯಾಪಕ ಡಾ.ಅಶೋಕ ಕುರ್ಲಿ ಕರೆ
ರಾಣೇಬೆನ್ನೂರು, ಆ.13- ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಅಶೋಕ ಕುರ್ಲಿ ಹೇಳಿದರು.
ತಾಲ್ಲೂಕಿನ ಸುಣಕಲ್ಲಬಿದರಿ ಶ್ರೀ ಅರಳಿ ಶಿದ್ಲಿಂಗಪ್ಪ ಬಸಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಶನಿವಾರ ಪ್ರಸಕ್ತ ಶೈಕ್ಷಣಿಕ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ, ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಗ್ರಂಥಪಾಲಕರ ದಿನಾಚರಣೆಯ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವುದು ಬಹುದೊಡ್ಡ ಸವಾಲಿನ ಕೆಲಸ. ಹೀಗಾಗಿ ಪದವಿ ಹಂತದಲ್ಲಿಯೇ ಉದ್ಯೋಗ ಅಗತ್ಯವಿರುವ ಪುಸ್ತಕಗಳನ್ನು ಓದುವ ಜೊತೆಗೆ ಸ್ಪೋಕನ್ ಇಂಗ್ಲಿಷ್ ಸೇರಿದಂತೆ ಇನ್ನಿತರೆ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಕಾಲೇಜಿನ ಪ್ರಾಚಾರ್ಯ ಪ್ರೊ. ಆರ್.ಎಫ್.ಅಯ್ಯನಗೌಡ್ರ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಉಪನ್ಯಾಸಕ ಬಿ.ಕೆ. ಕೊಟ್ಟದ, ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ. ಎನ್.ಬಿ. ಹನುಮಂತರಾಜು, ಡಾ.ಎಸ್.ಐ.ಮಲ್ಲಿಗಾರ, ದೈಹಿಕ ಶಿಕ್ಷಣ ನಿರ್ದೇಶಕ ಸೋಮಶೇಖರ ಮಡಿವಾಳರ, ಕೆ.ಜೆ.ಆರ್.ಲೋಹಿಯಾ, ಮಂಜುನಾಥ ಎನ್.ಜಿ., ಯಮುನ ನಾಯ್ಕ, ಸಂತೋಷಕುಮಾರ್, ಭಾಗ್ಯ ದೇವಗಿರಿಮಠ, ಪಿ.ಕೆ.ಬಿನ್ನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.