ಮಾಯಕೊಂಡ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ : ಶಾಸಕ ಬಸವಂತಪ್ಪ

ಮಾಯಕೊಂಡ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ : ಶಾಸಕ ಬಸವಂತಪ್ಪ

ದಾವಣಗೆರೆ, ಆ.13- ಮಾಯಕೊಂಡ ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸುತ್ತೇನೆ. ಇದಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮನವಿ ಮಾಡಿದರು.

ತಾಲ್ಲೂಕಿನ ಮಾಯಕೊಂಡ ಗ್ರಾಮ ಪಂಚಾಯಿತಿಗೆ ನಿನ್ನೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗ್ರಂಥಾಲಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಮಾಯಕೊಂಡ ಕ್ಷೇತ್ರವನ್ನು ಮೊದಲಿನಿಂದಲೂ ಕಡೆಗಣಿಸಲಾಗಿದೆ. ಇನ್ನು ಮುಂದೆ ಹಾಗೆ ಆಗಲು ಬಿಡುವುದಿಲ್ಲ. ಮಾಯಕೊಂಡ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಜವಾಬ್ದಾರಿ ನನ್ನದಾಗಿದೆ ಎಂದು ಭರವಸೆ ನೀಡಿದರು.

ಮಾಯಕೊಂಡ ಗ್ರಾಮ ಪಂಚಾಯಿತಿಗೆ ಸುಸಜ್ಜಿತ ಕಟ್ಟಡ ನಿರ್ಮಿಸಬೇಕಾಗಿದೆ. ಗ್ರಾಮ ಪಂಚಾಯಿತಿ ಆಡಳಿತ, ನರೇಗಾ ಅನುದಾನವನ್ನು ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಬಳಸಿರುವುದು ಸರಿಯಾದ ಕ್ರಮವಲ್ಲ. ಸರ್ಕಾರದ ಅನುದಾನದಿಂದ ಮಾತ್ರ ಅಭಿವೃದ್ಧಿ ಮಾಡಬೇಕೆಂದು ಸಲಹೆ ನೀಡಿದರು. 

ಗ್ರಾಪಂ ಅಧ್ಯಕ್ಷೆ ಶಿವಮ್ಮ ಮಲ್ಲಿಕಾರ್ಜುನ, ಉಪಾ ಧ್ಯಕ್ಷ ಮಂಜುನಾಥ್, ಉಪ ತಹಶೀಲ್ದಾರ್ ಹಾಲೇಶಪ್ಪ, ಗ್ರಾಪಂ ಪಿಡಿಒ ನಾಗರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ರಾಜೇಂದ್ರಣ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ವೆಂಕಟೇಶ್, ಗೋಪಾಲಪ್ಪ, ಮೆಡಿಕಲ್ ರುದ್ರೇಶಣ್ಣ, ಬೀರಪ್ಪ ಹಾಗೂ  ಇತರರು ಉಪಸ್ಥಿತರಿದ್ದರು.

error: Content is protected !!