ದಾವಣಗೆರೆ, ಆ. 17- ಹೆಚ್.ಎ.ಎಲ್, ವತಿಯಿಂದ ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿ.ಒ.ಪಿ.ಎ, ಫೌಂಡ್ರಿಮನ್ ಮತ್ತು ಶೀಟ್ ಮೆಟಲ್ ವರ್ಕರ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜಿಲ್ಲಾಡಳಿತ ಭವನ, 1ನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ, ಆಗಸ್ಟ್ 28 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು. ಅಭ್ಯರ್ಥಿಗಳು www.apprenticeshipindia.org ವೆಬ್ಸೈಟ್ನಲ್ಲಿ ನೋಂದಾಯಿಸಬೇಕು. ವಿವರಕ್ಕೆ ಸಂಪರ್ಕಿಸಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ ದೂರವಾಣಿ 7406323294.
January 16, 2025