ದಾವಣಗೆರೆ, ಆ.17- ಜಿಲ್ಲಾ ಮೀನು ಗಾರಿಕೆ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಕೃಷಿ ಕೊಳಗಳ ನಿರ್ಮಾಣ-10 ಹೆ, ಮೀನು ಕೃಷಿಕೊಳದ ಹೂಡಿಕೆ ವೆಚ್ಚಕ್ಕೆ ಸಹಾಯ-10 ಹೆ, ಸಿಹಿ ನೀರು ಬಯೋಫ್ಲಾಕ್ ಘಟಕ ಸ್ಥಾಪನೆಗೆ ಸಹಾ ಯಧನ-1, ಇನ್ಸುಲೇಟೆಡ್ (ಶಾಖ ನಿರೋ ಧಕ)
ವಾಹನ ಖರೀದಿಗೆ ಸಹಾಯಧನ-1 ಹಾಗೂ ಯಾಂತ್ರೀಕೃತ ದೋಣಿ ಖರೀದಿಗೆ-2 ರಂತೆ ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪ್ರಾರಂಭಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40
ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60ರಷ್ಟು ಸಹಾಯಧನ ನೀಡಲಾಗುತ್ತದೆ.
ಆಸಕ್ತರು ಇದೇ ದಿನಾಂಕ 22 ರೊಳಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು ಸಲ್ಲಿಸಲು ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಅಣ್ಣಪ್ಪಸ್ವಾಮಿ ತಿಳಿಸಿದ್ದಾರೆ.