ಸರ್ಕಾರಕ್ಕೆ ಎಂ.ಪಿ.ರೇಣುಕಾಚಾರ್ಯ ಆಗ್ರಹ
ಹೊನ್ನಾಳಿ, ಆ.17- ಹೊನ್ನಾಳಿ – ನ್ಯಾಮತಿ ಅವಳಿ ತಾಲೂಕಿನಾದ್ಯಂತ ಮುಂ ಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬೆಳೆಗಳು ಒಣಗುತ್ತಿದ್ದು, ಕೆರೆಕಟ್ಟೆಗಳ ಒಡಲು ಬರಿದಾಗಿದ್ದು, ಕೂಡಲೇ ರಾಜ್ಯ ಸರ್ಕಾರ ಅವಳಿ ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡುವಂತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸರ್ಕಾರವನ್ನು ಆಗ್ರಹಿಸಿದರು.
ತಾಲೂಕಿನ ಘಂಟ್ಯಾಪುರ ಗ್ರಾಮದಲ್ಲಿ, ಕೇಂದ್ರ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜನಸಂಪರ್ಕ ಅಭಿಯಾನದಡಿಯಲ್ಲಿ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
ಅವಳಿ ತಾಲ್ಲೂಕು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಮಳೆ ಕೈಕೊಟ್ಟಿದ್ದು, ರೈತರು ಬೆಳೆದ ಬೆಳೆಗಳು ಒಣಗಲು ಆರಂಭಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸರ್ಕಾರ ಕೂಡಲೇ ಇಡೀ ರಾಜ್ಯವನ್ನೇ ಬರಪೀಡಿತ ರಾಜ್ಯ ಎಂದು ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ಜಿ.ಪಂ. ಮಾಜಿ ಉಪಾಧ್ಯಕ್ಷ ಸುರೇಂದ್ರ ನಾಯ್ಕ, ತಾಂಡಾದ ಅಭಿವೃದ್ದಿ ನಿಗಮದ ಮಾಜಿ ನಿರ್ದೇಶಕ ಮಾರುತಿ ನಾಯ್ಕ, ಮುಖಂಡರಾದ ಹನುಮಂತನಾಯ್ಕ, ಮೀಟು ನಾಯ್ಕ, ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರಿದ್ದರು.