ಫೋಟೋಗ್ರಾಫರ್ ಯೂತ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ 184 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ರಾಜ್ಯದಲ್ಲಿ ಪ್ರಥಮ ಬಾರಿಗೆ ಸಾರ್ವಜನಿಕರಿಗಾಗಿ ನೂರಾರು ವರ್ಷಗಳ ಹಳೆಯದಾದ ಕ್ಯಾಮೆರಾಗಳು ಮತ್ತು ಛಾಯಾಗ್ರಹಣ ಪರಿಕರಗಳ ಪ್ರದರ್ಶನವನ್ನು ಗುರುಭವನದಲ್ಲಿ ಇಂದು ಮತ್ತು ನಾಳೆ ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಹಮ್ಮಿಕೊಳ್ಳಲಾಗಿದೆ.
ಇಂದು ನಡೆಯುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಚಿತ್ರದುರ್ಗ ಬೃಹನ್ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ವಹಿಸಲಿದ್ದು, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಎಸ್.ಎಸ್. ಕೇರ್ ಟ್ರಸ್ಟ್ ಲೈಫ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಲಿದ್ದಾರೆ.