24ರಿಂದ ದ.ಸಂ.ಸ.ನಿಂದ ರಾಜ್ಯ ಮಟ್ಟದ ಅಧ್ಯಯನ ಶಿಬಿರ

ದಾವಣಗೆರೆ, ಆ. 20- ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ವತಿಯಿಂದ ಇದೇ ದಿನಾಂಕ 24ರಿಂದ 27ರವರಗೆ `ದಲಿತ ಚಳುವಳಿ ಅಂದು..ಇಂದು..ಮುಂದು’ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ರಾಜ್ಯಮಟ್ಟದ ಅಧ್ಯಯನ ಶಿಬಿರ ಆಯೋಜಿಸಲಾಗಿದೆ ಎಂದು ದ.ಸಂ.ಸ. ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಹರದ ಹನಗವಾಡಿ ಪ್ರೊ.ಬಿ.ಕೃಷ್ಣಪ್ಪ ಭವನ, ಮೈತ್ರಿ ವನದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಈ ಶಿಬಿರವನ್ನು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್ ದಾಸ್ ಉದ್ಘಾಟಿಸಲಿದ್ದಾರೆ.

ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಇಂದಿರಾ ಕೃಷ್ಣಪ್ಪ, ಮಾನವ ಬಂಧುತ್ವ ವೇದಿಕೆ ಅಧ್ಯಕ್ಷ ಎ.ಬಿ. ರಾಮಚಂದ್ರಪ್ಪ, ಡಾ.ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಬಿ.ಎನ್. ಉಮೇಶ್ ಜನ ಪ್ರಕಾಶನದ ಬಿ.ರಾಜಶೇಖರ ಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

29 ಜಿಲ್ಲೆಗಳ ಸಂಘಟನೆಯ ಪ್ರಮುಖ ಕಾರ್ಯಕರ್ತರು ಹಾಗೂ ಜಿಲ್ಲೆಗಳ ಪದಾಧಿಕಾರಿಗಳು ಮಾತ್ರ ಭಾಗವಹಿಸಲು ಅವಕಾಶವಿದೆ. ಶಿಬಿರದಲ್ಲಿ 12 ಗೋಷ್ಠಿಗಳು ಇರಲಿವೆ. ದಿನಾಂಕ 27ರಂದು ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮಾನವ ಬಂಧುತ್ವ ವೇದಿಕೆ ಅಧ್ಯಕ್ಷ ಪ್ರೊ.ಎ.ಬಿ. ರಾಮಚಂದ್ರಪ್ಪ ಮಾತನಾಡಿ, ಕಳೆದ ನಾಲ್ಕು ದಶಕಗಳಲ್ಲಾದ ಬದಲಾವಣೆ, ಚರಿತ್ರೆ, ನಾಳಿನ ಸಾಧ್ಯತೆಗಳ ಬಗ್ಗೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಬಿರ ನಡೆಸಲಾಗುತ್ತಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರುದ್ರಪ್ಪ ಹನಗವಾಡಿ, ಮಣಿಪಾಲ್ ರಾಜಪ್ಪ, ಜೀವೇಶ್, ನಾಗಣ್ಣ ಬಡಿಗೇರ್ ಇತರರು ಉಪಸ್ಥಿತರಿದ್ದರು.

error: Content is protected !!