ದಾವಣಗೆರೆ, ಆ. 21 – ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರೆಸಲಾಗುವುದು ಎಂದು ಪ್ರಜಾಪ್ರಭುತ್ವ ವೇದಿಕೆ ರಾಜ್ಯಾಧ್ಯಕ್ಷ ಮಹೇಶ್ಶೆಟ್ಟಿ ತಿಮರೋಡಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 11 ವರ್ಷದ ಹಿಂದೆ ನಡೆದಿದ್ದ ಪ್ರಕರಣದಲ್ಲಿ ಇದುವರೆಗೆ ನ್ಯಾಯ ದೊರೆತಿಲ್ಲ. ಇದರ ಹಿಂದೆ ಷಡ್ಯಂತ್ರ ನಡೆದಿದೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸೌಜನ್ಯ ಕುಟುಂಬದ ಸ್ಥಿತಿ ಸ್ಮಶಾನದಂತಾಗಿದೆ. ನನಗೆ ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಂಬಿಕೆ ಇದ್ದು ನ್ಯಾಯ ಸಿಗುವ ವಿಶ್ವಾಸವಿದೆ. ಈಗಲೂ ಪ್ರಕರಣದ ಮರು ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ಅನಿಲ್ಕುಮಾರ್, ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಮಣಿ ಸರ್ಕಾರ್, ಶ್ರೀಧರ್, ರಾಹುಲ್, ಪರಶುರಾಂ, ರಾಜು, ಮಾರ್ಕಂಡೇಯ ಮತ್ತಿತರರು ಉಪಸ್ಥಿತರಿದ್ದರು.