ದಾವಣಗೆರೆ, ಆ. 22- ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಆಗಸ್ಟ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14 ಕೆ.ಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾ ರರಿಗೆ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯ ಬದಲು ವ್ಯಕ್ತಿಗೆ ತಲಾ ರೂ.170ರಂತೆ ಡಿ.ಬಿ.ಟಿ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದು ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಶಾಖೆಗಳಿಗೆ ಹಾಗೂ ಸ್ಥಳೀಯ ಆಹಾರ ನಿರೀಕ್ಷರನ್ನು ಸಂಪರ್ಕಿಸಿ ಸರಿಪಡಿಸಿಕೊ ಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
December 21, 2024