ದಾವಣಗೆರೆ, ಆ. 22- ಪ್ರಸಕ್ತ ಸಾಲಿನ ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ 2022ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ.ಜಾ ಹಾಗೂ ಪ.ಪಂ ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಜಿಲ್ಲಾ ಕ್ರೀಡಾಂಗಣ ದಲ್ಲಿರುವ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆ ದಿನ. ವಿವರಕ್ಕೆ ದೂ.ಸಂ, 08192 237480 ಸಂಪರ್ಕಿಸಲು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.