ದಾವಣಗೆರೆ, ಆ.22- ಅಭಿವೃದ್ಧಿ ಸಂಸ್ಥೆ ವತಿಯಿಂದ ನಗರದ ಹೋಟೆಲ್ ಪೂಜಾ ಇಂಟರ್ ನ್ಯಾಷನಲ್ನಲ್ಲಿ ಇಂದಿನಿಂದ ಇದೇ ದಿನಾಂಕ 27 ರವರೆಗೆ ನಡೆಯುವ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ, ಮಾರಾಟ ಸಿಲ್ಕ್ ಇಂಡಿಯ-2023 ಕ್ಕೆ ಎಸ್.ಎಸ್. ಮೆಡಿಕಲ್ ಕಾಲೇಜಿನ ಪೆಥಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಶಶಿಕಲಾ ಪಿ.ಕೃಷ್ಣಮೂರ್ತಿ ಮತ್ತು ಮಿಸ್ ಕರ್ನಾಟಕ-2019 ಸುಪ್ರೀತಾ ಒಡೆಯರ್ ಹಾಗೂ ಮಿಸ್ ಕರ್ನಾಟಕ 1st ru 2023 ಸೃಜ ನಾ ವೀರೇಂದ್ರ ಕುಮಾರ್ ಚಾಲನೆ ನೀಡಿದರು.
ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿ ಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೇ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶವನ್ನು ಅಭಿವೃದ್ಧಿ ಸಂಸ್ಥೆಯು ಹೊಂದಿದೆ.
ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂ ವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 60 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡುವರು.