ಜೆಜೆಎಂ ಮೆಡಿಕಲ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

ಜೆಜೆಎಂ ಮೆಡಿಕಲ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

ದಾವಣಗೆರೆ, ಆ. 25- ನಗರದ ಜೆ.ಜೆ.ಎಂ. ಮೆಡಿಕಲ್ ಕಾಲೇಜಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಹಿರಿಯ ಶಾಸಕ   ಶಾಮನೂರು ಶಿವಶಂಕರಪ್ಪ ಅವರು ಉಚಿತ ಲ್ಯಾಪ್‌ಟಾಪ್ ವಿತರಿಸಿದರು.

38 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿ ನಿಮ್ಮ ಸೇವೆ ನಮ್ಮ ಕಾಲೇಜಿಗೆ, ರಾಜ್ಯಕ್ಕೆ, ದೇಶಕ್ಕೆ ಕೀರ್ತಿ ತರುವಂತಿರಲಿ ಎಂದು ಎಸ್ಸೆಸ್ ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಬಿ. ಮುರುಗೇಶ್ ಉಪಸ್ಥಿತರಿದ್ದರು. 

error: Content is protected !!