ಅರೆ ನೀರಾವರಿ ಬೆಳೆಗಳಿಗೆ ಸಲಹೆ

ದಾವಣಗೆರೆ, ಆ.25- ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಮತ್ತು 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದು ಕೊಂಡು ಅರೆ ನೀರಾವರಿ ಬೆಳೆಗಳಿಗೆ ಮಾತ್ರ ನೀರನ್ನು ಒದಗಿಸಲಾಗುವುದು.

ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಿ, ಬೇಸಿಗೆ ಬೆಳೆಗೆ ನೀರು ಉಳಿಸುವ ಸಲುವಾಗಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಬಿದ್ದಾಗ ಮಳೆಯ ಪ್ರಮಾಣಕ್ಕನುಗುಣವಾಗಿ ಕಾಲುವೆಗಳಲ್ಲಿ ನೀರು ಹರಿಸಲಾಗುತ್ತಿದ್ದು, ಮುಂಗಾರು ಹಂಗಾಮಿನಲ್ಲಿ ರೈತರು ಹೆಚ್ಚು ನೀರುಣಿಸುವ ಭತ್ತದ ಬೆಳೆಯನ್ನು ಹೊರತುಪಡಿಸಿ ಅರೆ ನೀರಾವರಿ ಬೆಳೆಗಳನ್ನು ಬೆಳೆಯಬೇಕು.

ಮಲೇಬೆನ್ನೂರು ಶಾಖಾ ನಾಲೆ ಅಚ್ಚುಕಟ್ಟು ಪ್ರದೇಶಕ್ಕೆ ಕಬ್ಬು 2800 ಹೆಕ್ಟೇರ್, ತೋಟಗಾರಿಕೆ 182 ಹೆಕ್ಟೇರ್, ಅರೆ ನೀರಾವರಿ 20,792 ಹೆಕ್ಟೇರ್ ಒಳಗೊಂಡಂತೆ ಒಟ್ಟು 23,774 ಹೆಕ್ಟೇರ್, ದೇವರಬೆಳಕೆರೆ ಪಿಕಪ್ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ ಕಬ್ಬು 500 ಹೆಕ್ಟೇರ್, ತೋಟಗಾರಿಕೆ 458 ಹೆಕ್ಟೇರ್, ಅರೆ ನೀರಾವರಿ 3,332 ಹೆಕ್ಟೇರ್ ಒಳಗೊಂಡಂತೆ ಒಟ್ಟು 4280 ಹೆಕ್ಟೇರ್ ಹಾಗೂ ಆನವೇರಿ  ಶಾಖಾ ನಾಲೆ ಅಚ್ಚುಕಟ್ಟು ಪ್ರದೇಶಕ್ಕೆ ಕಬ್ಬು 200 ಹೆಕ್ಟೇರ್, ತೋಟಗಾರಿಕೆ 121 ಹೆಕ್ಟೇರ್, ಅರೆ ನೀರಾವರಿ 5998 ಹೆಕ್ಟೇರ್ ಒಳಗೊಂಡಂತೆ ಒಟ್ಟು 6319 ಹೆಕ್ಟೇರ್ ಮಾದರಿ ಬೆಳೆ ಬೆಳೆಯಲು ಹಾಗೂ ಈ ಬೆಳೆಗಳನ್ನು ಬೆಳೆಯದೇ ಭತ್ತ ಮತ್ತು ಇನ್ನಿತರೆ ಬೆಳೆ ಬೆಳೆದರೆ ಜಲ ಸಂಪನ್ಮೂಲ ಇಲಾಖೆಯು ಜವಾಬ್ದಾರಿಯಾಗುವುದಿಲ್ಲ.

ಬೆಳೆ ಪದ್ಧತಿಯನ್ನು ಉಲ್ಲಂಘಿಸುವವರು, ನೀರಾವರಿ ಕಾಲುವೆ ಹಾಗೂ ಕಟ್ಟಡಗಳನ್ನು ಜಖಂಗೊಳಿಸುವವರು, ನಿಯಮಿತ ಪ್ರಮಾಣಕ್ಕಿಂತ ಹೆಚ್ಚು ನೀರನ್ನು ಬಳಸುವವರು ಮತ್ತು ಪಂಪ್ ಮಾಡಿ ಅನಧಿಕೃತವಾಗಿ ನೀರನ್ನು ಬಳಸಿಕೊಂಡು ನೀರಾವರಿ ಬೆಳೆಗಳನ್ನು ಬೆಳೆದು ನಿಯಮ ಉಲ್ಲಂಘನೆ ಮಾಡಿದಲ್ಲಿ ಪರಿಶೀಲಿಸಿ ಅಂತವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕನೀನಿನಿ, ನಂ.3 ಭದ್ರಾ ನಾಲಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಿ.ಎಸ್.ಪಟೇಲ್ ತಿಳಿಸಿದ್ದಾರೆ.

error: Content is protected !!