ನಗರದಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

ನಗರದಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

ದಾವಣಗೆರೆ, ಆ. 25- ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ನಗರದ ದೇವರಾಜ ಅರಸು ಬಡಾವಣೆಯಲ್ಲಿನ ಜಿಲ್ಲಾ ಕಾರ್ಮಿಕ ಇಲಾಖೆ ಮುಂದೆ ನಿನ್ನೆ ಪ್ರತಿಭಟನೆ ನಡೆಸಿ, ಕಾರ್ಮಿಕ ಆಯುಕ್ತರ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಜಿಲ್ಲಾಧ್ಯಕ್ಷ ಕೆ.ಹೆಚ್. ಆನಂದರಾಜ್ ಮಾತನಾಡಿ, ಕಟ್ಟಡ ಕಾರ್ಮಿಕರ ಮಕ್ಕಳ ಬಾಕಿ ಇರುವ ಶೈಕ್ಷಣಿಕ ಅರ್ಜಿಗಳಿಗೆ ತಕ್ಷಣ ಹಣ ವರ್ಗಾ ವಣೆ ಮಾಡಬೇಕು. ಫಲಾನು ಭವಿಯ ಕಾರ್ಡ್ ನವೀಕ ರಣಕ್ಕೆ ವೇತನ ಚೀಟಿ ಮತ್ತು ಹಾಜರಾತಿ ಪಟ್ಟಿ ಕಡ್ಡಾಯ ಗೊಳಿಸಿರುವ ಆದೇಶ ವನ್ನು ಹಿಂಪಡೆಯ ಬೇಕು. ಜೊತೆಗೆ ಬೋಗಸ್ ಕಾರ್ಡ್ ನಿಯಂತ್ರಿ ಸಲು ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿದರು.

ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಆರಂಭಿಸ ಲಾದ ಶಿಶು ವಿಹಾರ, ಮೊಬೈಲ್ ಕ್ಲಿನಿಕ್‌ಗಳು, ಬಸ್‌ ಪಾಸ್ ಬೇಡ. ಇವುಗಳ ಬದಲು ಮನೆ ನಿರ್ಮಾಣಕ್ಕೆ ಐದು ಲಕ್ಷ ರೂ. ಸಹಾಯಧನ ನೀಡಬೇಕು. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಭವಿಷ್ಯ ನಿಧಿ ಯೋಜನೆ ಜಾರಿ ಮಾಡಬೇಕು. ಸ್ಲಂ ಬೋರ್ಡ್‌ಗೆ ನೀಡಿದ ಹಣವನ್ನು ಮಂಡಳಿಗೆ ಮರು ಪಾವತಿ ಮಾಡಬೇಕೆಂದು ಹೇಳಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಕುಮಾರ್, ಶ್ರೀನಿವಾಸಮೂರ್ತಿ, ನೇತ್ರಾವತಿ, ಶಿವಣ್ಣ, ರೂಪ, ಮಂಜು ನಾಥ್, ಚಿದಾನಂದ, ರಾಜಪ್ಪ ಇತರರು ಪಾಲ್ಗೊಂಡಿದ್ದರು.

error: Content is protected !!