ಹರಪನಹಳ್ಳಿ ತಾ.ಪಂ ಮಾಜಿ ಸದಸ್ಯ ಹುಲಿಕಟ್ಟಿ ಚಂದ್ರಪ್ಪ ಕರೆ
ಹರಪನಹಳ್ಳಿ, ಆ.27- ಯುವಕರು ದುಶ್ಚಟಗಳಿಗೆ ಬಲಿಯಾಗಿ ಕುಟುಂಬ ಬೀದಿಗೆ ಬರುವ ಮುಂಚೆಯೇ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಉತ್ತಮ ಆರೋಗ್ಯವಂತರನ್ನಾಗಿ ಮಾಡುವ ಕೆಲಸ ಪೋಷಕರ ಮೇಲೆ ಇದೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹುಲಿಕಟ್ಟಿ ಚಂದ್ರಪ್ಪ ಹೇಳಿದರು.
ಪಟ್ಟಣದ ವಾಲ್ಮೀಕಿ ನಗರದ ಹುಲ್ಲುಗರಡಿಕೇರಿ ಯಲ್ಲಿರುವ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸಂಘದ ಸದಸ್ಯರಿಗೆ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ದೈಹಿಕ ಮಾನಸಿಕವಾಗಿ ಸದೃಢರಾಗಲು ಪ್ರತಿದಿನ ಉತ್ತಮವಾದ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು. ದೇಹದ ಪ್ರಮುಖ ಅಂಗವಾಗಿರುವ ಕಣ್ಣು ಬಹುಮುಖ್ಯವಾಗಿದೆ. ರಕ್ತನಾಳಗಳನ್ನು ಅವುಗಳ ಸ್ವಾಭಾವಿಕ ಸ್ಥಿತಿಯಲ್ಲಿ ಕಾಣುವ ಏಕೈಕ ಅಂಗ ಕಣ್ಣು. ಆದ್ದರಿಂದ ಪ್ರತಿಯೊಬ್ಬರೂ ಕಣ್ಣನ್ನು ರಕ್ಷಣೆ ಮಾಡಿಕೊಳ್ಳಬೇಕು ಎಂದರು.
ಆರೋಗ್ಯಾಧಿಕಾರಿ ವಿಫುಲ್ ಮಾತನಾಡಿ, ಮನುಷ್ಯನ ಪಂಚೇಂದ್ರಿಯಗಳಲ್ಲಿ ಕಣ್ಣು ಬೆಳಕನ್ನು ಕಾಣುವ ಜ್ಞಾನೇಂದ್ರೀಯವಾಗಿದೆ. ದೃಷ್ಟಿ ಅಥವಾ ದುರ್ಬಲ ದೃಷ್ಟಿ ಇಲ್ಲದೇ ನಿಮ್ಮ ಜೀವನವನ್ನು ಕಲ್ಪಿಸಿಕೊಳ್ಳಲಾಗದು. ಕಣ್ಣುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ತಾಲ್ಲೂಕಿನಲ್ಲಿ ಸುಮಾರು 4 ರಿಂದ 5 ಸಾವಿರ ಸಂಘಗಳನ್ನು ರಚನೆ ಮಾಡಿ, ಸಾಲ ಸೌಲಭ್ಯ ನೀಡುವುದರ ಜೊತೆಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಇನ್ನು ಹೆಚ್ಚಿನ ಮಟ್ಟದಲ್ಲಿ ಗ್ರಾಮೀಣ ಭಾಗಗಳಲ್ಲಿ ಸಾಲ ಸೌಲಭ್ಯ ನೀಡುವುದರ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಲ್ಲಿ ಸಂಘವು ಶ್ರಮಿಸುತ್ತಿದೆ ಎಂದರು.
ವಲಯ ಮೇಲ್ವಿಚಾರಕ ರಕ್ಷಿತ್ ಮಾತನಾಡಿ, ಕಣ್ಣು ದೇಹದ ಪ್ರಮುಖ ಭಾಗವಾಗಿದ್ದು, ಕಣ್ಣುಗಳಿಗೆ ಹಾನಿ ಅಥವಾ ದೃಷ್ಟಿ ದೋಷ ಕಂಡುಬಂದಲ್ಲಿ ನಿಮ್ಮ ಕಣ್ಣಿನ ಆರೈಕೆ ವೃತ್ತಿಪರರನ್ನು ಭೇಟಿ ಮಾಡುವುದು ಮತ್ತು ನಿಮ್ಮ ಕಣ್ಣುಗಳನ್ನು ನಿಯಮಿತವಾಗಿ ಪರಿಕ್ಷೆ ಮಾಡಿಕೋಳ್ಳಬೇಕು ಎಂದರು.
ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸೇವಾ ಪ್ರತಿನಿದಿಗಳಾದ ಕೆ.ಕರಿಬಸಮ್ಮ, ಸೇರಿದಂತೆ ಇತರರು ಉಪಸ್ಥಿತರಿದ್ದರು.