ದಾವಣಗೆರೆ – ಶಾಮನೂರಿನ ಜನತಾ ಕಾಲೋನಿಯಲ್ಲಿ ಶ್ರೀ ಮಾರಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮವು ಇಂದು ಮತ್ತು ನಾಳೆ ನಡೆಯಲಿದೆ.
ಮೂರ್ತಿ ಪ್ರತಿಷ್ಠಾಪನೆ ಪ್ರಯುಕ್ತ ಇಂದು ಸಂಜೆ 6 ಗಂಟೆಯಿಂದ ಹೋಮ ಮತ್ತು ವಿಶೇಷ ಪೂಜೆಗಳು ಜರುಗಲಿವೆ.
ನಾಳೆ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಶ್ರೀ ಮಾರಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮವು ಹೆಬ್ಬಾಳು ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದೆ. ಮಧ್ಯಾಹ್ನ 12.30ರಿಂದ ಅನ್ನ ಸಂತರ್ಪಣೆ ಏರ್ಪಾಡಾಗಿದೆ.