ಗೃಹಲಕ್ಷ್ಮಿ ಯೋಜನೆ ದೇಶದಲ್ಲಿಯೇ ಮಾದರಿ

ಗೃಹಲಕ್ಷ್ಮಿ ಯೋಜನೆ ದೇಶದಲ್ಲಿಯೇ ಮಾದರಿ

ಹರಪನಹಳ್ಳಿ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಬಣ್ಣನೆ

ಹರಪನಹಳ್ಳಿ, ಆ.30- ಗೃಹಲಕ್ಷ್ಮಿ ಯೋಜನೆ ಇದು ದೇಶದಲ್ಲಿಯೇ ಮಾದರಿ ಯೋಜನೆಯಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.

 ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪುರಸಭೆ ವತಿಯಿಂದ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಮಹಿಳೆಯರು ಯಾರ ಹತ್ತಿರ ಹಣಕ್ಕಾಗಿ
ಕೈ ಚಾಚದೇ ಗೃಹಲಕ್ಷ್ಮಿ ಯೋಜನೆಯ ಹಣವನ್ನು ತಮ್ಮ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ನಿರ್ವಹಣೆಗೆ ಬಳಕೆ ಮಾಡಿಕೊಳ್ಳುವ ಮೂಲಕ ಸದುಪಯೋಗ ಪಡೆದುಕೊಳ್ಳಿ ಎಂದರು.

ಈಗಾಗಲೇ ತಾಲ್ಲೂಕಿನಲ್ಲಿ ಶೇ. 80 ರಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆ ನೋಂದಾಯಿಸಿಕೊಂಡಿದ್ದು, ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಫಲಾನುಭವಿಗಳನ್ನು ಹೊಂದಲಾಗಿದೆ. ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅನುಕೂಲವಾಗಲಿದೆ ಎಂದು ಹೇಳಿದರು. 

ಉಪವಿಭಾಗಾಧಿಕಾರಿ ಟಿ.ವಿ. ಪ್ರಕಾಶ್‌, ಸಿಡಿಪಿಒ ಹರೀಶ್ ಮಾತನಾಡಿದರು. ತಹಶೀಲ್ದಾರ್ ಗಿರೀಶ ಬಾಬು, ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕಮಾರ, ಪುರಸಭಾ ಸದಸ್ಯರಾದ ಎಂ.ವಿ.ಅಂಜಿನಪ್ಪ, ಲಾಟಿ ದಾದಾಪೀರ್,   ಜಟ್ಟೆಪ್ಪರ ಮಂಜುನಾಥ, ಕಂಚಿಕೇರಿ ಜಯಲಕ್ಷ್ಮಿ, ಗುಂಡಗತ್ತಿ ನೇತ್ರಾವತಿ, ಕವಿತ, ಸುರೇಶ್‌, ರೇಣುಕಾ ಮಂಜುನಾಥ,  ಎಲ್.ಎಂ. ನಾಯ್ಕ, ಶೋಭಾ ಉಪಸ್ಥಿತರಿದ್ದರು.

error: Content is protected !!