ದಾವಣಗೆರೆ, ಸೆ.6- ವಿಟಿಯು ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾ ಲಯಕ್ಕೆ ಬೆಳ್ಳಿ ಪದಕ ಲಭಿಸಿದೆ. ಬೆಂಗಳೂರಿನ ವೇಮನ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಟಿಯು ರಾಜ್ಯ ಮಟ್ಟದ ಅತ್ಯುತ್ತಮ ದೇಹ ದಾರ್ಢ್ಯತೆ ಮತ್ತು ಭಾರ ಎತ್ತುವ ಸ್ಪರ್ಧೆಯಲ್ಲಿ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ 4ನೇ ಸೆಮಿಸ್ಟರ್, ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಓದುತ್ತಿರುವ ಎಸ್. ಗಗನ್ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾಗವಹಿಸಿ, 71 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
January 16, 2025