ದಾವಣಗೆರೆ, ಸೆ. 6- ನಗರದ ಆರ್ ಜಿ ಪ್ರಿ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀಮತಿ ಶ್ವೇತ ಆರ್. ಗಾಂಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕೃಷ್ಣ ಜನ್ಮಾಷ್ಟಮಿ ಕುರಿತು ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಆರ್. ಚೈತ್ರ ಮಾಹಿತಿ ನೀಡಿದರು. ಶಾಲೆಯಲ್ಲಿ ಎಲ್ಲ ಮಕ್ಕಳು ಕೃಷ್ಣನ ಉಡುಗೆಗಳನ್ನು ಧರಿಸಿದ್ದರು. ಶಾಲೆಯ ಶಿಕ್ಷಕರಾದ ಸುಮಾ, ಸಂತೋಷ, ರಿಯಾ ಹಾಗು ಇತರೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
January 15, 2025