ದಾವಣಗೆರೆ, ಸೆ. 6- ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ನಾಡಿದ್ದು ದಿನಾಂಕ 8 ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51 ರಲ್ಲಿ ವಿವಿಧ ಹುದ್ದೆಗಳ ಆಯ್ಕೆಗಾಗಿ ನೇರ ಸಂದರ್ಶನ ನಡೆಯಲಿದೆ.
ಈ ಆಯ್ಕೆ ಸಂದರ್ಶನದಲ್ಲಿ ಹಲವು ಖಾಸಗಿ ಸಂಸ್ಥೆಗಳು ಭಾಗವಹಿಸಲಿವೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 63615 50016, 08192 259446 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.