ದಾವಣಗೆರೆ, ಸೆ. 5- ನಗರದ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಅತ್ಯುತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ. ಕೊಟ್ರೇಶ್, ಪ್ರಥಮ ದರ್ಜೆ ಸಹಾಯಕ ಚನ್ನಬಸವರಾಜ್ ಅತಿಥಿಗಳಾಗಿ ಆಗಮಿಸಿದ್ದರು.
ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬುಳ್ಳಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಬಿ. ಸುಜಾತ, ಕೊಂಡಜ್ಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಕೆ. ಜಯಶ್ರೀ, ಶ್ರೀರಾಮನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಎ.ಎಲ್. ನಾಗವೇಣಿ, ದಾವಣಗೆರೆ ಸಿವಿವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಡಿ. ಹಾಲಪ್ಪ, ನಲ್ಲೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಹೆಚ್.ಪಿ. ಶಿವಲಿಂಗಪ್ಪ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥ ಬೇಸಿಲ್ ರಾಜನ್ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.