ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ 2022ರ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾಗಿದ್ದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ನೇತೃತ್ವದಲ್ಲಿ ಇಂದು ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಇಂದು ಸಂಜೆ 5 ಗಂಟೆಗೆ ಎಸ್.ನಿಜಲಿಂಗಪ್ಪ ಬಡಾವಣೆಯ ಅಮರ್ ಜವಾನ್ ಪಾರ್ಕ್‍ನಿಂದ ಆರಂಭಗೊಳ್ಳುವ ಮೆರವಣಿಗೆ ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.