ನಗರದ ಬಿಐಇಟಿಯಲ್ಲಿ ಇಂದು ಸ್ಟೂಡೆಂಟ್ ಇಂಡಕ್ಷನ್ ಪ್ರೋಗ್ರಾಮ್

ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಮೊದಲನೇ ಸೆಮಿಸ್ಟರ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ಟೂಡೆಂಟ್ ಇಂಡಕ್ಷನ್ ಪ್ರೋಗ್ರಾಮ್- 2023 ಶಿಬಿರವನ್ನು ಇಂದಿನಿಂದ ಇದೇ ದಿನಾಂಕ 16 ರವರೆಗೆ ಹಮ್ಮಿಕೊಳ್ಳಲಾಗಿದೆ.

ಇಂದು ಬೆಳಿಗ್ಗೆ 10.30ಕ್ಕೆ ನಡೆಯುವ ಶಿಬಿರದ ಉದ್ಘಾಟನಾ ಸಮಾರಂಭವನ್ನು ಕಾಲೇಜಿನ ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಕೇಂದ್ರದ ಪ್ರೊ. ಯು.ಆರ್. ರಾವ್, ಸ್ಯಾಟಲೈಟ್ ಕೇಂದ್ರದ ವಿಜ್ಞಾನಿ ಮತ್ತು ಚಂದ್ರಯಾನ-3ರಲ್ಲಿ, ಪ್ರಮುಖ ಪಾತ್ರವಹಿಸಿದ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿ ಶಿವಕುಮಾರ್ ಎಸ್. ಪಾಟೀಲ್‌ ಮತ್ತು ಕಾಲೇಜಿನ ಪ್ರಾಚಾರ್ಯ ಡಾಮ ಎಚ್.ಬಿ. ಅರವಿಂದ್ ಭಾಗವಹಿಸುತ್ತಿದ್ದು,  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ನಿರ್ದೇಶಕ ಪ್ರೊ ವೈ. ವೃಷಬೇಂದ್ರಪ್ಪ ವಹಿಸಲಿದ್ದಾರೆ.

error: Content is protected !!