ದಾವಣಗೆರೆ ವಿವಿಯಲ್ಲಿ ರಕ್ತದಾನ ಶಿಬಿರ

ದಾವಣಗೆರೆ ವಿವಿಯಲ್ಲಿ ರಕ್ತದಾನ ಶಿಬಿರ

ದಾವಣಗೆರೆ, ಸೆ. 11- ದಾವಣಗೆರೆ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ದಾವಣಗೆರೆ ಸಹಯೋಗದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ  ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ದಾವಣಗೆರೆಯ ಎಲ್ಲ ಪದಾಧಿಕಾರಿಗಳು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇತರರು ಇದ್ದರು.

error: Content is protected !!