ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಅಮವಾಸ್ಯೆ ವಿಶೇಷ ಪೂಜೆ

ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ  ಇಂದು ಅಮವಾಸ್ಯೆ ವಿಶೇಷ ಪೂಜೆ

ದಾವಣಗೆರೆಯ ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಬೆನಕನ ಅಮಾವಾಸ್ಯೆ ಪ್ರಯುಕ್ತ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಅಮ್ಮನವರಿಗೆ ಇಂದು 108 ಲೀ. ಹಾಲಿನ ಅಭಿಷೇಕ, ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಅರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. 

ಶ್ರೀಮತಿ ವಸಂತಬಾಯಿ ವಸಂತರಾವ್ ಸಬಾಳೆ ಮತ್ತು  ಕುಟುಂಬದವರು ಸೇವಾಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.

error: Content is protected !!