ದಾವಣಗೆರೆ, ಸೆ. 17 – ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕೈಗೊಳ್ಳಲು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಇದೇ ದಿನಾಂಕ 20, 22 ಹಾಗೂ 28 ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಮದ್ಯ ಮಾರಾಟ ನಿಷೇಧಿಸಿ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಆದೇಶಿಸಿದ್ದಾರೆ.
January 14, 2025