ದಾವಣಗೆರೆ: ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿನ ನವೀಕರಣಗೊಂಡ ಈಜುಕೊಳದ ಉದ್ಘಾಟನಾ ಸಮಾರಂಭ ಸೆ. 22ರಂದು ಸಂಜೆ 6 ಗಂಟೆಗೆ ನಡೆಯಲಿದೆ. ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಉದ್ಘಾಟನೆ ನೆರವೇರಿಸಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಮಹಾನಗರ ಪಾಲಿಕೆ ಮೇಯರ್ ವಿನಾಯಕ್ ಪೈಲ್ವಾನ್, ಉಪಮೇಯರ್ ಯಶೋಧ ಯಗ್ಗಪ್ಪ, ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಆಯುಕ್ತೆ ರೇಣುಕಾ, ಅಬ್ದುಲ್ ಲತೀಫ್, ಉದಯ್ ಕುಮಾರ್ ಹೆಚ್., ಗಡಿಗುಡಾಳ್ ಮಂಜುನಾಥ್, ಮೀನಾಕ್ಷಿ ಎಂ. ಜಗದೀಶ್, ಅಹ್ಮದ್ ಕಬೀರ್ ಖಾನ್ ಅವರು ಪಾಲ್ಗೊಳ್ಳಲಿದ್ದಾರೆ.
January 15, 2025