ವಾಗೀಶ ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 9.30ಕ್ಕೆ ಮೇಡ್ಲೆರಿ ಕ್ರಾಸ್ನಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಿಂದ ಶ್ರೀ ವೀರಭದ್ರೇಶ್ವರ ಮೂರ್ತಿಯ ಭವ್ಯ ಮೆರವಣಿಗೆ ಜರುಗಲಿದೆ. ನಂತರ ಬೆಳಗ್ಗೆ 11 ಗಂಟೆಗೆ ದೇವಸ್ಥಾನದ ಸಭಾ ಭವನದಲ್ಲಿ ಹೊನ್ನಾಳಿ ಹಿರೇಕಲ್ಮಠದ ಒಡೆಯರ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧಾರ್ಮಿಕ ಧರ್ಮಸಭೆ ಜರುಗಲಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ರಾಜಣ್ಣ ಮೋಟಗಿ ತಿಳಿಸಿದ್ದಾರೆ.
ರಾಣೇಬೆನ್ನೂರಿನಲ್ಲಿ ಇಂದು ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ
![10 veerabhadra 4.04.2023 ರಾಣೇಬೆನ್ನೂರಿನಲ್ಲಿ ಇಂದು ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ](https://janathavani.com/wp-content/uploads/2023/04/10-veerabhadra-4.04.2023.jpg)