ಆರ್ಯ ಈಡಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಸೆ. 26- ಜಿಲ್ಲಾ ಆರ್ಯ ಈಡಿಗರ ಸಂಘ ಹಾಗೂ ಶ್ರೀ ರೇಣುಕಾಂಬ ಕ್ರೆಡಿಟ್ ಕೋ-ಆಪ್ ಸೊಸೈಟಿ ಇವರುಗಳ ಸಂಯುಕ್ತಾಶ್ರಯದಲ್ಲಿ 2022-23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಡಿಪ್ಲೋಮಾ ಪರೀಕ್ಷೆಯಲ್ಲಿ ಶೇ. 70 ಹಾಗೂ ಅದಕ್ಕೂ ಹೆಚ್ಚಿನ ಅಂಕ ಗಳಿಸಿದ ದಾವಣಗೆರೆ ಜಿಲ್ಲೆಯ ಆರ್ಯ ಈಡಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ದಿ. 15.10.2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಎ. ನಾಗರಾಜ್, ಕಾರ್ಯದರ್ಶಿ, ಆರ್ಯ ಈಡಿಗ ಹಾಸ್ಟೆಲ್, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಕಳುಹಿಸಬಹುದಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು ಎಂದು ಕಾರ್ಯದರ್ಸಿ ಎ. ನಾಗರಾಜ್ ತಿಳಿಸಿದ್ದಾರೆ. ವಿವರಕ್ಕೆ 88922 66468 ಈ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

error: Content is protected !!