ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ ಬೆಂಬಲ ಸೂಚಿಸಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಟಾರ್ಗೆಟ್ ಅಸ್ಲಾಂ ತಿಳಿಸಿದ್ದಾರೆ.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿದೆ. ಕಾವೇರಿ ಭಾಗದ ಜಿಲ್ಲೆಗಳಲ್ಲಿ ನೀರು ಸಿಗದೆ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯಲು ನೀರಿಲ್ಲ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ.
ತಮಿಳುನಾಡಿಗೆ ಹರಿಯುವ ನೀರು ನಿಲ್ಲಬೇಕು. ಕೇಂದ್ರ ಸರ್ಕಾರ ಕಾವೇರಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ. ಮಲತಾಯಿ ಧೋರಣೆ ನಿಲ್ಲಿಸಿ, ಈ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.