ಶ್ರೀ ಶಿವಕುಮಾರ ಶ್ರೀಗಳ ಶ್ರದ್ಧಾಂಜಲಿ ಭಕ್ತಿ ಸಮರ್ಪಣೆ ಕಾರ್ಯಕ್ರಮ

ಶ್ರೀ ಶಿವಕುಮಾರ ಶ್ರೀಗಳ ಶ್ರದ್ಧಾಂಜಲಿ  ಭಕ್ತಿ ಸಮರ್ಪಣೆ ಕಾರ್ಯಕ್ರಮ

ಬೆಂಗಳೂರು, ಸೆ. 28- ಇಲ್ಲಿನ ಆರ್.ಟಿ. ನಗರದ ತರಳಬಾಳು ಕೇಂದ್ರದಲ್ಲಿ ಲಿಂ. ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿ ಗಳವರ 31ನೇ ಶ್ರದ್ಧಾಂಜಲಿ ಪ್ರಯುಕ್ತ ಭರ್ಕಿ  ಸಮರ್ಪಣೆ ಕಾರ್ಯಕ್ರಮವನ್ನು  ನಾಡಿದ್ದು ದಿನಾಂಕ 30ರ ಶನಿವಾರ ಸಂಜೆ 5.30ಕ್ಕೆ ಏರ್ಪಡಿಸಲಾಗಿದೆ.

ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕ ಎಸ್.ಆರ್. ವಿಶ್ವನಾಥ್, ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ, ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ. ಬಿ.ಎಲ್. ಶಂಕರ್, ಮಾಜಿ ಪೊಲೀಸ್ ಮಹಾನಿರ್ದೇಶಕ ಶಂಕರ್ ಮಹದೇವ ಬಿದರಿ ಅವರುಗಳು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

 ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಗುರುವಂದನೆ ಸಲ್ಲಿಸಲಿದ್ದಾರೆ. 

error: Content is protected !!