ನಾಳೆ ಹಡಪದ ಅಪ್ಪಣ್ಣ ಜಯಂತ್ಯುತ್ಸವ, ಸಮಾವೇಶ

ನಾಳೆ ಹಡಪದ ಅಪ್ಪಣ್ಣ ಜಯಂತ್ಯುತ್ಸವ, ಸಮಾವೇಶ

ದಾವಣಗೆರೆ,ಅ. 1- ನಗರದ ಶಿವಯೋಗಾಶ್ರಮದಲ್ಲಿ ನಾಡಿದ್ದು ದಿನಾಂಕ 3 ರ ಮಗಳವಾರ ಬೆಳಿಗ್ಗೆ 11 ಗಂಟೆಗೆ ಶಿವಶರಣ, ಅವಿರಳ ಜ್ಞಾನಿ, ನಿಜಸುಖ ಹಡಪದ ಅಪ್ಪಣ್ಣನವರ 889 ನೇ ಜಯಂತ್ಯುತ್ಸವ ಮತ್ತು ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಜಗದ್ಗುರು ಅನ್ನದಾನಿ ಭಾರತಿ ಹಡಪದ ಅಪ್ಪಣ್ಣ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಡಪದ ಅಪ್ಪಣ್ಣ ಸಮಾಜಕ್ಕೆ ಒಳಿತಾಗಲಿ ಎಂಬ ಸದುದ್ಧೇಶದಿಂದ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದರು.

ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಶ್ರೀ ಬಸವ ಪ್ರಭು ಸ್ವಾಮೀಜಿ, ಶ್ರೀ ಬಸವ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮತ್ತಿತರರು ಸಾನ್ನಿಧ್ಯ ವಹಿಸುವರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಹೆಚ್. ಶಶಿಧರ್ ಬಸಾಪುರ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಶಾಸಕರಾದ ಕೆ.ಎಸ್. ಬಸವಂತಪ್ಪ, ವಿಜಯಾನಂದ ಕಾಶಪ್ಪನವರ್, ಬಸವರಾಜ ಶಿವಗಂಗಾ, ಮೇಯರ್ ವಿನಾಯಕ ಪೈಲ್ವಾನ್ ಮತ್ತಿತರರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಬಸವ ಕಲಾ ಲೋಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಾಟಕ ಮತ್ತು ಸಂಗೀತ ಕಾರ್ಯಕ್ರಮ ನಡೆಯಲಿದೆ. 

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸಚಿವ ಶಿವರಾಜ್ ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ಎಸ್. ಬಸವಂತಪ್ಪ, ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮತ್ತಿತರರು ಭಾಗವಹಿಸಲಿದ್ದಾರೆಂದು ಹೇಳಿದರು.

ಹೆಚ್.ಎಂ. ಅಭಿಷೇಕ್ ಮತ್ತು ಸಂಗಡಿಗರು ಜಗಜ್ಯೋತಿ ಬಸವೇಶ್ವರ ನಾಟಕ ಪ್ರದರ್ಶಿಸಲಿದ್ದು, ಖಾದರ್ ಮತ್ತು ಸಂಗಡಿಗರು ಸುಗಮ ಸಂಗೀತ, ಉಮೇಶ್ ಪತ್ತಾರ್ ವಚನ ಸಂಗಿತ, ಉಮೇಶ್ ನಾಯ್ಕ, ಹೆಚ್.ಆರ್. ಕಾರ್ತಿಕ್ ಮತ್ತಿತರರು ಕಾರ್ಯಕ್ರಮ ನೀಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಶಶಿಧರ್ ಬಸಾಪುರ, ಎನ್.ಜೆ. ಶಿವಕುಮಾರ್, ಬಾಡಾದ ರುದ್ರೇಶ್ ಮತ್ತಿತರರು ಉಪಸ್ಥಿತರಿದ್ದರು. 

error: Content is protected !!