ಜಿ.ಬಿ. ವಿನಯಕುಮಾರ್ ಅಭಿಮಾನಿಗಳ ಬಳಗ ಕಕ್ಕರಗೊಳ್ಳ ಇವರ ವತಿಯಿಂದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಇಂದು ಬೆಳಗ್ಗೆ 11 ಕ್ಕೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿ ಜನ್ಮ ದಿನಾಚರಣೆ, ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವಿಕಲಚೇತನರಿಗೆ ವ್ಹೀಲ್ ಚೇರ್, ವಾಕರ್ ಮತ್ತು ಶ್ರವಣ ಸಾಧನ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಶ್ರೀ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ.
ಹೊನ್ನಾಳಿ ಹಿರೇಕಲ್ಮಠದ ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹಾಗೂ ನಂದಿಗುಡಿ ಮಠದ ಶ್ರೀ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಸಲಕರಣೆಗಳನ್ನು ವಿತರಣೆ ಮಾಡಲಿದ್ದಾರೆ. ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಹೊಸ ದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಶ್ರೀ, ಡಾ. ಬಸವ ಮಡಿವಾಳ ಮಾಚೀದೇವ ಸ್ವಾಮೀಜಿ, ಶ್ರೀ ಬಸವ ಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಮೌಲ್ವಿ ಶಾಹಿದ್ ರಜ್ಹಾ ಪುಷ್ಪ ನಮನ ಸಲ್ಲಿಸಲಿದ್ದಾರೆ. ಇನ್‌ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಜಿ.ಬಿ ವಿನಯಕುಮಾರ್ ಕಕ್ಕರಗೊಳ್ಳ ಅಧ್ಯಕ್ಷತೆ ವಹಿಸಲಿದ್ದಾರೆ.