2006ರ ಪೂರ್ವದ ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತರ ವೇದಿಕೆಯಿಂದ ಜಿಲ್ಲಾ ಮಟ್ಟದ ಸಭೆಯನ್ನು ಇಂದು ಬೆಳಿಗ್ಗೆ 10.30 ಕ್ಕೆ ರೋಟರಿ ಬಾಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಡಾ.ಜಿ.ಆರ್.ಹೆಬ್ಬಾರ್, ರಾಜ್ಯ ಗೌರವಾಧ್ಯಕ್ಷ ಡಾ.ಪಿ.ಎಸ್.ಕೊಕಟನೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಜಿ.ಪಿ. ನಾಗರಾಜ, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಸಿ.ಡಿ.ರವಿ, ಕಾರ್ಯಾಧ್ಯಕ್ಷ ತಿಪಟೂರು ಅರಸೇಗೌಡ ಸೇರಿದಂತೆ ಇತರೆ ಗಣ್ಯರು ಆಗಮಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಹಾವೇರಿ ತಿಳಿಸಿದ್ದಾರೆ.