ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಶಿವಯೋಗಾಶ್ರಮದಲ್ಲಿ ಶಿವಶರಣ, ಅವಿರಳ ಜ್ಞಾನಿ, ನಿಜಸುಖಿ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ, ಶ್ರೀ ಬಸವ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಅನ್ನದಾನಿ ಭಾರತಿ ಬಸವಪ್ರಿಯ ಹಡಪದ ಅಪ್ಪಣ್ಣ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಬಸವ ಶಾಂತವೀರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಸಚಿವ ಶಿವರಾಜ ತಂಗಡಗಿ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ಸಮಾಜದ ಜಿಲ್ಲಾಧ್ಯಕ್ಷ ಶಶಿಧರ ಬಸಾಪುರ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ.ಎಸ್. ಬಸವಂತಪ್ಪ, ವಿಜಯಾನಂದ ಕಾಶಪ್ಪನವರ್, ಬಸವರಾಜ ಶಿವಗಂಗಾ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್, ಮೇಯರ್ ವಿನಾಯಕ ಪೈಲ್ವಾನ್, ಸಾಹಿತಿ ಬಾ.ಮ. ಬಸವರಾಜಯ್ಯ, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ರೈತ ಮುಖಂಡ ತೇಜಸ್ವಿ ಪಟೇಲ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.