ವಿಕಲಚೇತನರ ಸಾಧನೆಗೆ ರಾಜ್ಯ ಪ್ರಶಸ್ತಿಗೆ ಅರ್ಜಿ

ದಾವಣಗೆರೆ, ಅ. 5 – ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ 2023-24ನೇ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟ ಸೇವೆ ಸಲ್ಲಿಸಿರುವ ಹಾಗೂ ಸೇವೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನಮೂನೆ ಗಳನ್ನು ಇಲಾಖೆ ವೆಬ್‍ಸೈಟ್ (WWW.dwdsc.kar.nic.in  ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ. 25 ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾ ಇಲಾಖೆ ಕಚೇರಿಗೆ ಸಲ್ಲಿಸಬೇಕು. ವಿವರಕ್ಕೆ ದೂ. 08192-263936 ಹಾಗೂ ಜಿಲ್ಲಾ ವಿಕಲಚೇತನರ ಸಹಾಯವಾಣಿ ದೂ 081 92-263939ಗೆ ಸಂಪರ್ಕಿಸಬಹುದು.

error: Content is protected !!