ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 14 ರಿಂದ 17ವರ್ಷದ ವಯೋಮಿತಿ ಒಳಗಿನ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಇಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸಮಾರಂಭವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ ಸಿದ್ದೇಶ್ವರ, ಶಾಸಕ ಶಾಮನೂರು ಶಿವಶಂಕರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್, ಜಿ.ಪಂ. ಸಿಇಒ ಸುರೇಶ್ ಬಿ. ಇಟ್ನಾಳ್ ಸೇರಿದಂತೆ ಇತರರು ಉಪಸ್ಥಿತರಿರುವರು.