ದಾವಣಗೆರೆ, ಅ. 8 – ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಪಿ.ಹೆಚ್.ಡಿ ಸಂಶೋಧನೆ ಕರ್ನಾಟಕ ಡಿ.ಎಸ್.ಟಿ.-ಪಿ.ಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಸಂಸ್ಥೆ ಹಾಗೂ ಕಾಲೇಜುಗಳಲ್ಲಿ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರಬೇಕು.
ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಇದೇ ದಿನಾಂಕ 30 ರೊಳಗೆ ಸಲ್ಲಿಸಬೇಕು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ) ಬಸವರಾಜ ತಿಳಿಸಿದ್ದಾರೆ.