ದಾವಣಗೆರೆ, ಅ.8- ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಪಡೆ ಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸ ಲಾಗಿದೆ. ಪ್ರಿ-ಮೆಟ್ರಿಕ್ (9ನೇ ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿ ರುವ) ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಕುಟುಂಬದ ಆದಾಯದ ಮಿತಿ ರೂ. 2.00 ಲಕ್ಷ ನಿಗದಿಪಡಿಸಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನವಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಕುಟುಂಬದ ಆದಾಯದ ಮಿತಿ ರೂ. 2 ಲಕ್ಷ ನಿಗದಿಪಡಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ. ಹಾಗೂ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ 08192-263936 ಅಥವಾ ವೆಬ್‍ಸೈಟ್:www.scholarship.gov.in ಅನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕೆ.ಕೆ ಪ್ರಕಾಶ್ ತಿಳಿಸಿದ್ದಾರೆ.
November 25, 2024