ನಗರದಲ್ಲಿ ಇಂದು ಮಹಿಳೆಯರ ಯೋಗಾಸನ ಸ್ಪರ್ಧೆ

ದಾವಣಗೆರೆ, ಅ. 7- ಸಪ್ತರ್ಷಿ ಯೋಗಧಾರ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಶಿವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ನಾಳೆ ದಿನಾಂಕ 8 ರ ಭಾನುವಾರ ಬೆಳಿಗ್ಗೆ 10.30 ಕ್ಕೆ ಪ್ರಥಮ ಬಾರಿಗೆ ರಾಷ್ಟ್ರಮಟ್ಟದ ಮಹಿಳೆಯರ ಯೋಗಾಸನ ಚಾಂಪಿಯನ್ ಶಿಪ್ ನಡೆಯಲಿದೆ ಎಂದು ಸ್ವಾಗತ ಸಮಿತಿ ಗೌರವಾಧ್ಯಕ್ಷ ಶಂಕರ್ ಖಟಾವ್‌ಕರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎಸ್.ಎಸ್. ಕೇರ್ ಟ್ರಸ್ಟ್‌ನ ಲೈಫ್ ಟ್ರಸ್ಟಿ ಡಾ. ಪ್ರಭಾ ಮಲ್ಲಿ ಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮಾ ಕುಮಾರಿ ಲೀಲಾಜಿ, ಎಸ್ಪಿ ಉಮಾ ಪ್ರಶಾಂತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಎನ್‌ಎಸ್‌ಎಸ್ ಅನುಷ್ಠಾನ ಅಧಿಕಾರಿ ಡಾ.  ಎಸ್. ಪೂರ್ಣಿಮಾ ಜೋಗಿ, ಸಹಾಯಕ ನಿರ್ದೇಶಕಿ ಕೆ.ಆರ್. ಜಯಲಕ್ಷ್ಮಿಬಾಯಿ, ರೈತ ಮಹಿಳೆ ಎಂ.ಜಿ.ಶಶಿಕಲಾ, ಸಮಾಜ ಸೇವಕಿ ಸುಮನ್ ಖಮಿತ್ಕರ್ ಅವರು ಆಗಮಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಹರಿಹರ ನಗರಸಭೆ ಸದಸ್ಯ ಶಂಕರ್ ಖಟಾವ್‌ಕರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಬಿ.ಪಿ. ಹರೀಶ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ. ಮಂಜುನಾಥ, ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಇನ್‌ಸೈಟ್ಸ್ ಐಎಎಸ್ ಸಂಸ್ಥಾಪಕ ಹಾಗೂ ನಿರ್ದೇಶಕ ಜಿ.ಬಿ. ವಿನಯ್‌ಕುಮಾರ್, ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ್ ರಾಯ್ಕರ್, ಹರಿಹರ ಎಸ್‌ಜೆವಿಪಿ ಕಾಲೇಜಿನ ಪ್ರಾಧ್ಯಾಪಕ ವೀರಣ್ಣ ಬಿ. ಶೆಟ್ಟರ್, ವೈದ್ಯಾಧಿಕಾರಿ ಡಾ. ವಿಶ್ವನಾಥ್ ಕುಂದುಗೋಳ ಮಠ, ಹರಿಹರ ನಗರಸಭೆ ಮಾಜಿ ಅಧ್ಯಕ್ಷ ಬಿ. ರೇವಣಸಿದ್ಧಪ್ಪ, ಎಸ್‌ವೈಎಸ್‌ಎ ಅಧ್ಯಕ್ಷ ಡಾ. ಕೆ. ಜೈಮುನಿ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಎಸ್‌ವೈಎಸ್‌ಎ ಅಧ್ಯಕ್ಷ ಕೆ. ಜೈಮುನಿ, ಅಂತರರಾಷ್ಟ್ರೀಯ ಯೋಗ ಪಟು ಉಮೇಶ್ ಉಪಸ್ಥಿತರಿದ್ದರು.

error: Content is protected !!