ರಾಣೇಬೆನ್ನೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಣೇಬೆನ್ನೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಣೇಬೆನ್ನೂರು, ಅ.9 –  ರಕ್ತದಾನಕ್ಕೆ ಒಂದು ಜೀವ ಉಳಿಸುವ ಶಕ್ತಿಯಿದ್ದು, ಅದು ಎಲ್ಲಾ ದಾನಗಳಲ್ಲಿ ಅತ್ಯಂತ ಶ್ರೇಷ್ಠವಾಗಿದೆ ಎಂದು ಜಿ.ಪಂ. ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಹೇಳಿದರು.

ನಗರದ ಸಂಗಮ್ ಸರ್ಕಲ್ ಬಳಿ ಮಂಗಳವಾರ ಸ್ಥಳೀಯ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ವತಿಯಿಂದ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಮಂಟಪದಲ್ಲಿ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ರಕ್ತ ನಿಧಿ ಕೇಂದ್ರ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲದ ಕಾರಣ ಅದನ್ನು ದಾನಿಗಳಿಂದಲೇ ಪಡೆಯಬೇಕಾಗಿದೆ. ಆದ್ದರಿಂದ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬರೂ ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದರು. 

ಡಾ. ಮೃತ್ಯುಂಜಯ ಹರಿಹರ, ಕುಬೇರಗೌಡ ಸಣ್ಣಮನಿ, ಅಜಯ ಮಠದ, ಯುವರಾಜ ಬಾರಾಟಕ್ಕೆ, ಬ್ಲಡ್ ಬ್ಯಾಂಕ್‌ ಮುಖ್ಯಸ್ಥ ಡಾ. ಬಸವರಾಜ ತಳವಾರ, ಪ್ರಯೋಗಶಾಲಾ ತಂತ್ರಜ್ಞ ಬಸವರಾಜ ಕಮತರ, ಹರೀಶ ಸಣ್ಣ ಬೊಮ್ಮಜಿ, ಸುಮಾ ಲಮಾಣಿ ಮತ್ತು ಇತರರು  ಉಪಸ್ಥಿತರಿದ್ದರು.

error: Content is protected !!