ಕೊಪ್ಪದಲ್ಲಿ ನಾಳೆ ಗ್ರಾಮ ವಾಸ್ತವ್ಯ : ವಿನಯ್ ಕುಮಾರ್

ಕೊಪ್ಪದಲ್ಲಿ ನಾಳೆ ಗ್ರಾಮ ವಾಸ್ತವ್ಯ : ವಿನಯ್ ಕುಮಾರ್

ದಾವಣಗೆರೆ, ಅ.11- ಹರಿಹರ ವಿಧಾನಸಭಾ ಕ್ಷೇತ್ರದ ಗಡಿ ಗ್ರಾಮ ಕೊಪ್ಪದಲ್ಲಿ ನಾಳೆ ಗ್ರಾಮ ವಾಸ್ತವ್ಯ ಹಮ್ಮಿಕೊಂಡಿರುವುದಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಬಿ. ವಿನಯ್ ಕುಮಾರ್  ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ದಿನಾಂಕ 12ರ ಗುರುವಾರ ಸಂಜೆ 7 ಗಂಟೆಗೆ ಗ್ರಾಮಕ್ಕೆ ತೆರಳಿ, ಅಲ್ಲಿಯೇ ವಾಸ್ತವ್ಯ ಮಾಡಿ, ಮರುದಿನ ಗ್ರಾಮದಲ್ಲಿ ಶಾಲಾ ಮಕ್ಕಳು, ರೈತರು ಹಾಗೂ ಗ್ರಾಮಸ್ಥರೊಂದಿಗೆ ಸಂವಾದ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಹಾಲಿವಾಣ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರ ಸಹಕಾರ ಇದ್ದು, ಅವರೂ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಪಿಎಂ ಆವಾಸ್ ಯೋಜನೆಗಳು ಗ್ರಾಮೀಣ ಜನರಿಗೆ ಎಷ್ಟರ ಮಟ್ಟಿಗೆ ತಲುಪಿವೆ ಎಂಬುದನ್ನು ಅರ್ಥ ಮಾಡಕೊಳ್ಳಲು ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದರು. ಸಂಸದನಾಗಬೇಕಾದವನಿಗೆ ಗ್ರಾಮೀಣರ ಸಮಸ್ಯೆಗಳ ಅರಿವಿರಬೇಕು. ಈ ಹಿನ್ನೆಲೆಯಲ್ಲಿ ಈ ಯೋಜನೆ ರೂಪಿಸಲಾಗಿದ್ದು, ಸಮಸ್ಯೆಗಳು ಹಾಗೂ ಪರಿಹಾರೋ ಪಾಯಗಳ ವಿಜನ್ ಡಾಕ್ಯೂಮೆಂಟ್ ರಿಲೀಸ್ ಮಾಡುವ ಚಿಂತನೆ ಇದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ಎರಡು ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಮಾಡಿ ಜನರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

error: Content is protected !!