ವಿದ್ಯಾರ್ಹತೆಯೊಂದಿಗೆ ವೃತ್ತಿ ನೈಪುಣ್ಯತೆ ಅಗತ್ಯ

ವಿದ್ಯಾರ್ಹತೆಯೊಂದಿಗೆ ವೃತ್ತಿ ನೈಪುಣ್ಯತೆ ಅಗತ್ಯ

ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿದ ಸಚಿವ  ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ, ಅ.16 – ವಿದ್ಯಾರ್ಹತೆ ಜೊತೆಗೆ ಔದ್ಯೋಗಿಕ ಕ್ಷೇತ್ರಕ್ಕೆ ಬೇಕಿರುವ ಕೌಶಲ್ಯ, ವೃತ್ತಿ ನೈಪುಣ್ಯತೆ ಹೊಂದುವುದು ಅತಿ ಅವಶ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.

ನಗರದ ಹೈಸ್ಕೂಲ್ ಮೈದಾನದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಉತ್ಪಾದಕತೆ, ಯುವ ಮಾನವ ಸಂಪನ್ಮೂಲ ಮತ್ತು ಖರೀದಿ ಸಾಮರ್ಥ್ಯ ಅಧಿಕವಾಗಿರುವುದನ್ನು ಗಮನಿಸಿಯೇ, ವಿದೇಶಗಳ ಹಲವು ಕಂಪನಿಗಳು ಭಾರತದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರುತ್ತವೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಯುವಜನತೆಯ ಕೌಶಲ್ಯ ಹೆಚ್ಚಿಸಲು ಸರ್ಕಾರ ದೀನ್ ದಯಾಳ್ ಗ್ರಾಮೀಣ ಕೌಶಲ್ಯ ಯೋಜನೆ ಜಾರಿಗೊಳಿಸಿದೆ ಎಂದರು.

ಕಾರ್ಯಕ್ರಮದಲ್ಲಿ  ಎಸ್.ವಿ ಇಂಡಿಯಾನ್ ಕಂಪನಿ, ಸರ್ವೇ ಇಂಡಿಯಾನ್ ಕಂಪನಿ ಮತ್ತು ವಿಶ್ರಾ ಕಂಪನಿಗಳಿಂದ ಒಪ್ಪಿಗೆ ಪತ್ರ (ಆಫರ್ ಲೇಟರ್) ನೀಡಲಾಯಿತು.

ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಮೇಳಕ್ಕೆ 2,269 ಜನರು ನೋಂದಾಯಿಸಿ ಕೊಂಡಿ ದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಮೇಳ ಆಯೋಜಿಸುವ ಉದ್ದೇಶವಿದೆ ಎಂದರು.

ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಜಿಲ್ಲಾ ಪಂಚಾಯ್ತಿ ಸಿಇಒ ಸುರೇಶ್ ಇಟ್ನಾಳ್, ಪಾಲಿಕೆ ಆಯುಕ್ತೆ ರೇಣುಕಾ, ಕೌಶಲ್ಯಾಭಿವೃದ್ದಿ ಅಧಿಕಾರಿ ಬಸವನಗೌಡ, ತಹಶೀಲ್ದಾರ್ ಎಂ.ಬಿ. ಅಶ್ವತ್ಥ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಲ್ಲಿಕಾ ರ್ಜುನ್ ಮಠದ್ ಇತರರಿದ್ದರು.

error: Content is protected !!