ರಾಣೇಬೆನ್ನೂರು,ಅ.18- ಅವಿಭಜಿತ ಧಾರವಾಡ ಜಿಲ್ಲೆಯ ತಾಲ್ಲೂಕು ಮಾರ್ಕೆಟಿಂಗ್ ಸೊಸೈಟಿಯ ಕೆಸಿಸಿ ಬ್ಯಾಂಕ್ ಪ್ರತಿನಿಧಿ ಚುನಾವಣೆಯಲ್ಲಿ ಒಟ್ಟು 18 ಮತಗಳಲ್ಲಿ ಕಾಂಗ್ರೆಸ್ ಬೆಂಬಲಿತ ರಾಣೇಬೆನ್ನೂರಿನ ತಿರುಪತಿ ಅಜ್ಜನವರ 11ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ.
ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಸವಣೂರಿನ ಶರಣಪ್ಪಗೌಡ ಅವರು 7 ಮತಗಳನ್ನು ಪಡೆದು ಪರಾಜಿತರಾದರು.
ಚುನಾವಣೆಯಲ್ಲಿ ತಮ್ಮ ಆಯ್ಕೆಗೆ ಶ್ರಮಿಸಿದ ಮಾಜಿ ಸಭಾಪತಿ ಕೆ.ಬಿ. ಕೋಳಿವಾಡ ಸೇರಿದಂತೆ ಕ್ಷೇತ್ರದ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರಿಗೆ ತಿರುಪತಿ ಕೃತಜ್ಞತೆ ಸಲ್ಲಿಸಿದ್ದಾರೆ.