ದವನ್ ಕಾಲೇಜಿನ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಕಾಲೇಜಿನ ಜಂಟಿ ಕಾರ್ಯದರ್ಶಿ ಡಾ. ಜಿ.ಎಸ್. ಅಂಜು
ದಾವಣಗೆರೆ, ಅ. 18- ಇಂದಿನ ವೈಜ್ಞಾನಿಕ ಯುಗದಲ್ಲಿ ಎಲೆ ಮರೆ ಕಾಯಿಯಾಗಿ ಇರುವ ಗ್ರಾಮೀಣ ಪ್ರತಿಭೆಗಳು ಯುವಜನೋತ್ಸವದಂತಹ ಕಾರ್ಯಕ್ರಮಗಳ ಮುಖೇನ ಬೆಳಕಿಗೆ ಬರಲು ಸಹಾಯಕವಾಗಿದೆ ಎಂದು ದವನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವೀರೇಶ್ ಪಟೇಲ್ ಹೇಳಿದರು.
ದವನ್ ವಿದ್ಯಾಸಂಸ್ಥೆ ವತಿಯಿಂದ ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಮೊನ್ನೆ ಏರ್ಪಡಿಸಿದ್ದ ಅಂತರ್ ಕಾಲೇಜು ಮಟ್ಟದ ಯುವಜನೋತ್ಸವದಲ್ಲಿ ಅವರು ಮಾತನಾಡಿದರು.
2 ವರ್ಷಗಳಿಗೊಮ್ಮೆ ದವನ ವಿದ್ಯಾಸಂಸ್ಥೆ ವತಿಯಿಂದ ಯವಜನೋತ್ಸವ ಆಚರಿಸುತ್ತಾ ಬಂದಿದ್ದೇವೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಕಾಲೇಜುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದು ಶ್ಲ್ಯಾಘನೀಯ ಎಂದು ವೀರೇಶ್ ಪಟೇಲ್ ತಿಳಿಸಿದರು.
ಕಾಲೇಜಿನ ಜಂಟಿ ಕಾರ್ಯದರ್ಶಿ ಡಾ. ಜಿ.ಎಸ್. ಅಂಜು ಮಾತನಾಡಿ, ಈ ಸ್ಪರ್ಧೆಯು ವಿದ್ಯಾರ್ಥಿಗಳಿಗೆ ಬಹಳ ಮುಖ್ಯವಾಗಿದೆ. ಯಾವುದೇ ಸ್ಪರ್ಧೆಯಲ್ಲಿ ಗೆಲುವು, ಸೋಲಿಗಿಂತ ಭಾಗವಹಿಸುವಿಕೆ ಮುಖ್ಯ. ನಿರಂತರ ಪ್ರಯತ್ನ, ಪರಿಶ್ರಮದಿಂದ ಬೆಳೆಯಬೇಕು ಎಂದರು.
ಕಾಲೇಜಿನ ನಿರ್ದೇಶಕ ಹರ್ಷರಾಜ ಎ. ಗುಜ್ಜರ್ ಮಾತನಾಡಿ, ಇದೊಂದು ದೊಡ್ಡ ಕಾರ್ಯಕ್ರಮವಾಗಿದ್ದು, ಹಲವು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ವಿದ್ಯಾ ರ್ಥಿಗಳು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ದಾವಣಗೆರೆ ವಿವಿ ವ್ಯಾಪ್ತಿಯ 30 ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ ಭಾಗವಹಿಸಿ, ಮೂಕಾಭಿನಯ, ನೃತ್ಯ, ಬೆಸ್ಟ್ ಎಂಟರ್ ಟೈನ್ ಮೆಂಟ್, ರಂಗೋಲಿ ಮತ್ತು ವಿಜ್ಞಾನ, ವಾಣಿಜ್ಯ, ತಾಂತ್ರಿಕ ಪ್ರದರ್ಶನಗಳಲ್ಲಿ ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಿದರು.
ಬಾಪೂಜಿ ತಾಂತ್ರಿಕ ಮಹಾವಿದ್ಯಾ ಲಯದ ಪ್ರಾಧ್ಯಾಪಕ ಡಾ. ಜಿ.ಪಿ.ದೇಸಾಯಿ ಗೀತೆಯನ್ನು ಹಾಡುವ ಮೂಲಕ ರಂಜಿಸಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ರಾದ ಅನಿತಾ, ಪ್ರಾಧ್ಯಾಪಕರಾದ ವಿನಯ್, ಕೊಟ್ರಪ್ಪ, ಶಂಕರ್, ಚಂದನ್ ಉಪಸ್ಥಿತರಿದ್ದರು.