ಪ್ರಾಥಮಿಕ ಶಿಕ್ಷಕರ ಸ್ಥಳ ಆಯ್ಕೆಯ ಕೌನ್ಸಿಲಿಂಗ್ ಪ್ರಕ್ರಿಯೆ

ದಾವಣಗೆರೆ, ಅ. 19 – ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ 6 ರಿಂದ 8ನೇ ತರಗತಿಯಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಸ್ಥಳ ಆಯ್ಕೆಯ ಕೌನ್ಸಿಲಿಂಗ್ ಪ್ರಕ್ರಿಯೆ ಅ.21 ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಹೈಸ್ಕೂಲ್ ಮೈದಾನದ ಹತ್ತಿರ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದ್ದಾರೆ.

error: Content is protected !!